ಉದಯವಾಹಿನಿ, ಬೆಂಗಳೂರು: ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ)ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ವೀಪರ್, ಅಶ್ವಮೇಧ ಸಾರಿಗೆ ಸೇವೆಗಳೊಂದಿಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆ ಒದಗಿಸಲಿದೆ.
ದಸರಾ ಹಬ್ಬದ ರಜೆಗಳ ಪ್ರಯುಕ್ತ ಅ.೯ರಿಂದ ೧೨ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತ ರಾಜ್ಯದ ವಿವಿಧ ಸ್ಥಳಗಳಿಗೆ ೨೦೦೦ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಚರಿಸಲಿದೆ. ನಂತರ ರಾಜ್ಯದ ಮತ್ತು ಅಂತ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.೧೩ ರಿಂದ ೧೪ರವರೆಗೆ ವಿಶೇಷ ವಾಹನವು ಕಾರ್ಯಾಚರಣೆ ಮಾಡಲಿದೆ.

ಮೈಸೂರು ದಸರಾ ಪ್ರಯುಕ್ತ ೬೬೦ ವಿಶೇಷ ಸಾರಿಗೆ ವ್ಯವಸ್ಥೆ/ವಿಶೇಷ ಪ್ಯಾಕೇಜ್‌ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದು ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ ೨೬೦ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತ ಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್‌ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌ಡಿಕೋಟೆ, ಚಾಮರಾಜನಗರ, ಹುಣಸೂರು, ಕೆಆರ್‌ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕಕಲ್ಪಿಸಲು ೪೦೦ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ ೬೬೦ ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲಿದೆ.

Leave a Reply

Your email address will not be published. Required fields are marked *

error: Content is protected !!