ಉದಯವಾಹಿನಿ, ಕೊಪ್ಪಳ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಕೀಲರ ಸಂಘ ಹಾಗೂ ಕಿನ್ನಾಳ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಗುರುವಾರ ದತ್ತು ಗ್ರಾಮಕ್ಕೆ ಚಾಲನೆ ನೀಡಲಾಯಿತು.
ಮೊದಲೇ ನಿರ್ಧರಿಸಿದಂತೆ ಜಿಲ್ಲಾ ನ್ಯಾಯಾಲಯವು ಮೇಲ್ವಿಚಾರಣೆಯೊಂದಿಗೆ ಕಿನ್ನಾಳ ದತ್ತು ಪಡೆದುಕೊಳ್ಳಲು ನಿರ್ಧರಿಸಿತ್ತು.
ಗ್ರಾಮದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಜರುಗಿದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ ‘ನ್ಯಾಯಕ್ಕಾಗಿ ಎಲ್ಲರೂ ನ್ಯಾಯಾಂಗದ ಮೊರೆ ಹೋದರೆ, ನಿಮ್ಮ ಅದೃಷ್ಟಕ್ಕೆ ನಿಮ್ಮೂರಿನ ಪ್ರಗತಿಗಾಗಿ ನ್ಯಾಯಾಂಗವೇ ಇಲ್ಲಿಗೆ ಬಂದಿದೆ. ನಿಮ್ಮ ಗ್ರಾಮದ ಸ್ವಚ್ಛತೆಯ ಜೊತೆಗೆ ನಿಮ್ಮ ಅಂತರಂಗವು ಸ್ವಚ್ಛವಾಗಿಟ್ಟುಕೊಳ್ಳಿ, ನಿಮ್ಮ ಮನಸ್ಸಿನಲ್ಲಿನ ಕಲ್ಮಷಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಂಕಲ್ಪ ಮಾಡಬೇಕು’ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಸಂಗಪ್ಪ ದರಗದ, ನ್ಯಾಯಾಧೀಶರಾದ ಕುಮಾರ ಡಿ.ಕೆ, ಸರಸ್ವತಿದೇವಿ, ರಾಮಪ್ಪ ಒಡೆಯರ್, ಆದಿತ್ಯ ಕುಮಾರ, ಭಾಗ್ಯಲಕ್ಷ್ಮಿ, ರಂಗಸ್ವಾಮಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ, ಬೆಳ್ಳಪ್ಪ, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲೆ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರಿಯಮ್ಮ ಉಪ್ಪಾರ, ಉಪಾಧ್ಯಕ್ಷ ದುರುಗಪ್ಪ ಡಂಬರ, ಹೆಚ್ಚುವರಿ ಎಸ್.ಪಿ. ಹೇಮಂತಕುಮಾರ, ಕಾಮನಕಟ್ಟೆ ಗೆಳೆಯರ ಬಳಗ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಎ.ವಿ. ಕಣವಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷಎಲ್ಲರ ಸಹಕಾರದೊಂದಿಗೆ ಕಿನ್ನಾಳ ಗ್ರಾಮವನ್ನು ಅಭಿವೃದ್ಧಿಯ ಸಂಕಲ್ಪ ಮಾಡಿದ್ದೇವೆ. ಇದಕ್ಕೆ ಸಾರ್ವಜನಿಕರ ಹಾಗೂ ಗ್ರಾಮಸ್ಥರ ಸಹಕಾರವೂ ಅಗತ್ಯ.
