ಉದಯವಾಹಿನಿ, ಗುಡಿಬಂಡೆ: ತಾಲ್ಲೂಕಿನ ದಪ್ಪರ್ತಿ ಗ್ರಾಮ ವೇಣುಗೋಪಾಲ ದೇವಸ್ಥಾನದಲ್ಲಿ ಕಳ್ಳರು ಸುಮಾರು ₹8 ರಿಂದ ₹9 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ, ಹುಂಡಿ ಹಣ, ಸಿಸಿ ಕ್ಯಾಮರ ಡಿವಿಆರ್‌ನ್ನು ದೋಚಿದ್ದಾರೆ.ಬೀರುವಿನಲ್ಲಿದ್ದ 2.75 ಕೆ.ಜಿ ಬೆಳ್ಳಿ ಕವಚ, 1 ಕೆ.ಜಿ ಬೆಳ್ಳಿಯ ಪೂಜೆ ಸಾಮಾನು, 15 ಗ್ರಾಂ ಚಿನ್ನದ ತಾಳಿ ಮತ್ತು ಹುಂಡಿಯಲ್ಲಿದ್ದ ಸುಮಾರು ₹50 ಸಾವಿರ ಕಳವಾಗಿದೆ. ವ್ಯಕ್ತಿಯೊಬ್ಬರು ದೇವಸ್ಥಾನದ ಕಾಂಪೌಂಡ್‌ಗೆ ಏಣಿಯನ್ನು ಹಾಕಿರುವುದು ಗಮನಿಸಿ ದೇವಾಲಯದ ಉಸ್ತುವಾರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದ ಅರ್ಚಕರು, ಗ್ರಾಮಸ್ಥರು ಸ್ಥಳಕ್ಕೆ ಭೇಟಿದಾಗ ಕಳ್ಳತನವಾಗಿರುವುದು ಕಂಡುಬಂದಿದೆ. ದಪ್ಪರ್ತಿ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬೀರುವಿನಲ್ಲಿದ್ದ ಬೆಳೆಬಾಳುವ ಬೆಳ್ಳಿ ಬಂಗಾರದ ಆಭರಣಗಳನ್ನು ಕಳ್ಳರು ಕಳ್ಳತನ ಮಾಡಿರುವುದು.
