ಉದಯವಾಹಿನಿ, ಬೆಂಗಳೂರು: ರಾಜ್ಯದ ಜನರಿಗೆ ಪ್ರಚೋದನೆ ನೀಡಿ ತಮಗೆ, ತಮ ಕುಟುಂಬಕ್ಕೆ ಹಾನಿ ಮಾಡುವ ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಈಗ ಮತ್ತೊಂದು ದೂರನ್ನುಪೊಲೀಸ್ ಮಹಾ ನಿರ್ದೇಶಕರಿಗೆ ನೀಡಿ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ವಿರುದ್ಧ
ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ಮೂಲಕ ದೂರು ನೀಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ.
