ಉದಯವಾಹಿನಿ, ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನ ಉದ್ಘಾಟಿಸುವುದನ್ನ ಸ್ವಾಗತಿಸಿದರು. ಇನ್ನೀದು ಇಡೀ ದೇಶಕ್ಕೆ ಹೆಮ್ಮೆ ಮತ್ತು ಅಪಾರ ಸಂತೋಷದ ವಿಷಯವಾಗಿದೆ ಎಂದು ಹೇಳಿದರು.ಹೊಸ ಸಂಸತ್ ಭವನದ ಉದ್ಘಾಟನೆಯನ್ನ ದೇಶದ ಇತಿಹಾಸದಲ್ಲಿ ಸುವರ್ಣ ಪದಗಳಲ್ಲಿ ಬರೆಯಲಾಗುವುದು ಎಂದು ರಾಷ್ಟ್ರಪತಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.’ಹೊಸ ಸಂಸತ್ ಭವನದ ಉದ್ಘಾಟನೆಯು ಭಾರತದ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಸಂತೋಷದ ವಿಷಯವಾಗಿದೆ’ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಅಂದ್ಹಾಗೆ, ಅವರ ಸಂದೇಶವನ್ನ ರಾಜ್ಯಸಭಾ ಉಪಸಭಾಪತಿ ಹರಿವಂಶ್ ಓದಿದರು.
