ಉದಯವಾಹಿನಿ, ನವದೆಹಲಿ: ಭಾರತದ ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಗೊಳ್ಳುತ್ತಿದ್ದಂತೆ, ನಮ್ಮ ಹೃದಯ, ಮನಸ್ಸುಗಳು ಹೆಮ್ಮೆ ಮತ್ತು ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿ. ಕನಸುಗಳನ್ನು ಸೃಷ್ಟಿಸಿ ಮತ್ತು ಅವುಗಳನ್ನು ಈಡೇರಿಸುವಂತಾಗಲಿ.ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.
