ಉದಯವಾಹಿನಿ, ಢಾಕಾ: ದುರ್ಗಾ ಪೂಜೆಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆದಿವೆ.
ಢಾಕಾದಲ್ಲಿ ಕೆಲವೆಡೆ ದುಷ್ಕರ್ಮಿಗಳು ದುರ್ಗೆಯನ್ನು ಪ್ರತಿಷ್ಠಾಪನೆ ಮಾಡಿದ ಪೆಂಡಾಲ್ ಮೇಲೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾರೆ.ಓಲ್ಡ್ ಢಾಕಾದ ತಾಟಿ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪೆಟ್ರೋಲ್ ಬಾಂಬ್ ಎಸೆದ ನಂತರ, ಭಾರೀ ಸದ್ದು ಕೇಳಿಬಂದಿದೆ.ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.ಪ್ರಾಣಭೀತಿಯಿಂದ ಜನರು ಓಡಲು ಆರಂಭಿಸಿದ್ದರಿಂದ ಭಾರೀ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಕಾರಣವಾಗಿದೆ.ಈ ಘಟನೆಯಲ್ಲಿ ಹಲವು ಜನ ಗಾಯಗೊಂಡಿದ್ದಾರೆ.ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೆಟ್ರೋಲ್ ಬಾಂಬ್ ಎಸೆದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.ಈ ಘಟನೆಗೆ ಹಿಂದೂ ಸಂಘಟನೆಯಿಂದ ಭಾರಿ ಅಕ್ರೋಶ ಉಂಟಾಗಿದೆ.ಬಾಂಗ್ಲಾದೇಶದಲ್ಲಿ ಅಕ್ಟೋಬರ್ ೧ ರಿಂದ ಇಲ್ಲಿಯವರೆಗೆ ೩೫ ದುರ್ಗಾ ಪೂಜೆಗೆ ಅಡ್ಡಿಪಡಿಸಿದ ಘಟನೆಗಳು ನಡೆದಿವೆ.
