ಉದಯವಾಹಿನಿ, ಬೆಂಗಳೂರು: ಕಳೆದ ರಾತ್ರಿ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ಸಂಭವಿಸಿದ ರೈಲು ಅಪಘಾತ ಬಗ್ಗೆ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿ, ಹೆಚ್ಚಿನ ಅನಾಹುತ ತಪ್ಪಿದೆ. ದೇವರ ದಯೆಯಿಂದ ಅಪಘಾತದಲ್ಲಿ ಹೆಚ್ಚಿನ ಸಾವು ನೋವು ತಪ್ಪಿದೆ ಎಂದಿದ್ದಾರೆ.
ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದ್ವು ಎಂದು ವಿ.ಸೋಮಣ್ಣ ತಿಳಿಸಿದರು. ತುಂಬಾ ಒಳ್ಳೇ ದಿನ, ಅಪಘಾತದಲ್ಲಿ ದೊಡ್ಡ ಅನಾಹುತವಾಗಿಲ್ಲ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇಂದು ಅವರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುವುದು. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯಿತು ಎಂದು ತನಿಖೆ ಆಗಬೇಕಿದೆ ಎಂದರು.
