ಉದಯವಾಹಿನಿ, ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ ಕೃತ್ಯದಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳ ಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸ್ ಅಧ್ಯಕ್ಷಕರಿಗೆ ದೂರು ನೀಡಿದ್ದಾರೆ.ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾದ ಜಾಹೀರಾತುವಿನಲ್ಲಿ ಮುಖ್ಯಮಂತ್ರಿಯವರು ತಮ್ಮ ಮೇಲಿನ ಆರೋಪವನ್ನು ಮುಚ್ಚಿಕೊಳ್ಳಲು ಹಾಗೂ ಪ್ರಚೋದನೆ ನೀಡಲು ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿದ್ದಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯವನ್ನು ವಾಮಮಾರ್ಗ ಹಾಗೂ ಮೋಸದಿಂದ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ದುಷ್ಟ ಶಕ್ತಿಗಳನ್ನು ತಾಯಿ ಚಾಮುಂಡೇಶ್ವರಿ ದೇವಿಯು ನಿಗ್ರಹಿಸಿ ನಾಡಿನ ಜನತೆಗೆ ಸುಖ, ಶಾಂತಿ ಮತ್ತು ನೆಮ್ಮದಿ ಕರುಣಿಸಲಿ ಎಂದು ಉಲ್ಲೇಖಿಸಲು ಕಾರಣಗಳೇನು? ಎಂದು ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದಾರೆ.

ಯಾವೆಲ್ಲಾ ದಾಖಲಾತಿಗಳನ್ನು ಪರಿಶೀಲಿಸಬೇಕು. ಯಾವೆಲ್ಲಾ ಅಂಶಗಳನ್ನು ಪರಿಗಣಿಸಬೇಕು ಎಂಬ ವಿಚಾರಗಳನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಮದುವೆಯಾದಾಗಿನಿಂದಲೂ ಯಾವುದೇ ಆಸ್ತಿಗಳನ್ನು ಉಡುಗೊರೆಯಾಗಿ ನೀಡದೇ ಇದ್ದವರು 2010 ರಲ್ಲೇ ಕೆಸರೆ ಗ್ರಾಮದ ಜಮೀನನ್ನು ದಾನ ಪತ್ರ ಮಾಡಿಕೊಟ್ಟಿದ್ದೇಕೆ? ಎಂಬ ಅಂಶಗಳನ್ನು ಪ್ರಶ್ನಿಸಲಾಗಿದೆ.
ದೇವರಾಜು ಅವರ ಜಮೀನಿನ ಮಾಲೀಕತ್ವವನ್ನು ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದಾರೆ. ಕಾಲಕಾಲಕ್ಕೆ ಮುಡಾಗೆ ಸಲ್ಲಿಸಲಾದ ಮನವಿಗಳನ್ನು ಸಿದ್ಧಪಡಿಸಿದವರು ಯಾರು?, ಭೂಸ್ವಾಧಿನ ಮತ್ತು ಭೂ ಪರಿವರ್ತನೆ ಪ್ರಕ್ರಿಯೆಗಳ ಲೋಪಗಳೇನು? ಎಂಬುದನ್ನು ಸಮಗ್ರವಾಗಿ ವಿವರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!