ಉದಯವಾಹಿನಿ,ಬೆಂಗಳೂರು: ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ.  ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಂಕರ ಮಾತನಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ?

ದೇವರು-ಧರ್ಮದ ಹೆಸರಲ್ಲಿ ದೇಶವನ್ನು – ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ. ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಮಾಡಿ ಎಂದು ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ಯಾವ ಮನುಷ್ಯರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ ತಾನೆ? ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ. ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಮನವಿ ಮಾಡುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!