ಉದಯವಾಹಿನಿ, ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ ನೀಡಿದ್ದಾರೆ.ರೇಣುಕಾಸ್ವಾಮಿ ಹತ್ಯೆಯಾದ ಸಂದರ್ಭದಲ್ಲಿ ಸಹನಾ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಕುಟುಂಬಸ್ಥರು ದುಃಖತಪ್ತರಾಗಿ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದಾರೆ.
ಸಹನಾ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡುಮಗುವಿಗೆ ಜನ ನೀಡಿದ್ದಾರೆ. ಇದರಿಂದಾಗಿ ಕುಟುಂಬಸ್ಥರು ತಮ ಮಗನೇ ಹುಟ್ಟಿ ಬಂದಷ್ಟು ಖುಷಿಪಟ್ಟಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ತಮ ಮಗ ಬದುಕಿದ್ದರೆ ಸಂತೋಷಪಡುತ್ತಿದ್ದ ಎಂದು ರೇಣುಕಾಸ್ವಾಮಿ ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ.
