ಉದಯವಾಹಿನಿ, ಚಾಮರಾಜನಗರ: ಗುಂಡ್ಲುಪೇಟೆ ಭಾಗದಲ್ಲಿ ಎಡಬಿಡದೇ ಮಳೆ ಆರ್ಭಟಿಸುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೆರೆಗಳು ತುಂಬಿದ್ದು ಕೋಡಿ ಒಡೆಯುವ ಭೀತಿಯಲ್ಲಿದೆ.
ಗುಂಡ್ಲುಪೇಟೆ ತಾಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಭಾರೀ ಮಳೆಗೆ ಕೆರೆತುಂಬಿ ಕೋಡಿ ಒಡೆದು ಏರಿ ಮೇಲೆ ನೀರು ಹರಿಯುತ್ತಿದೆ. ಮಳೆಗೆ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಕೋಡಿ ಸರಿಯಿಲ್ಲದ ಕಾರಣ ಏರಿ ಮೇಲೆ ನೀರು ಹರಿಯುತ್ತಿದೆ. ಕೆರೆಗಳು ಒಡೆಯುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.
ರೆಗಳು ಒಡೆದರೆ, ರೈತರು ಬೆಳೆದ ನೂರಾರು ಎಕರೆ ಫಸಲು ನಾಶವಾಗುವ ಆರಂತ ಎದುರಾಗಿದೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಬೇಕೆಂದು ಗ್ರಾಮದ ವೆಂಕಟೇಶ್ ಸೇರಿ ಹಲವರು ಒತ್ತಾಯಿಸಿದ್ದಾರೆ.
ಕೆಲವು ತಿಂಗಳ ಹಿಂದೆಯಷ್ಟೇ ಮುಂಗಾರು ಆರ್ಭಟಕ್ಕೆ ಕೋಡಿ ಬಿದ್ದಿದ್ದ ಕೆರೆಗಳು, ಈಗ ಎರಡನೇ ಸಲ ಭರ್ತಿಯಾಗಿ ಕೋಡಿ ಬಿದ್ದಿವೆ. ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಕಮರಹಳ್ಳಿ ಕೆರೆ ನಿರಂತರ ಮಳೆಗೆ ವರ್ಷಗಳ ಬಳಿಕ ಕಳೆದ ತಿಂಗಳು ಕೋಡಿ ಬಿದ್ದಿತ್ತು.
ಕಮರಹಳ್ಳಿ ಕೆರೆ ತುಂಬಿ ಕೋಡಿ ಬಿದ್ದಿರುವ ಕಾರಣ ಸುತ್ತಮುತ್ತಲ ಪಂಪ್ ಸೆಟ್‌ಗಳಲ್ಲಿ ನೀರು ಅಧಿಕವಾಗಿ ಬರತೊಡಗಿದೆ. ಇದು ರೈತರ ವ್ಯವಸಾಯಕ್ಕೆ ಪೂರಕವಾಗಿದೆ. ಕೂತನೂರು ಕೆರೆಯೂ ಕೂಡ ಎರಡನೇ ಬಾರಿ ಕೋಡಿ ಬಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
