ಉದಯವಾಹಿನಿ, ಶಿವಮೊಗ್ಗ: ಕಾಂಗ್ರೆಸ್ ಪಕ್ಷದವರು ಸರ್ಕಾರ ಬಂದಿದೆ ಎಂಬ ಅಮಲಿನಲ್ಲಿದ್ದಾರೆ, ಅವರ ಅಮಲನ್ನು ಲೋಕಸಭಾ ಚುನಾವಣೆಯಲ್ಲಿ ಇಳಿಸಬೇಕು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಹರಿಹಾಯ್ದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಸರ್ಕಾರ ಬಂದಿದೆ ಎಂಬ ಅಮಲಿನಲ್ಲಿದ್ದಾರೆ. ಅಮಲಿನಲ್ಲಿ ಅನೇಕ ಮಾತುಗಳನ್ನು ಆಡುತ್ತಿದ್ದಾರೆ. ಆರ್ಎಸ್ಎಸ್ ಬ್ಯಾನ್ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಬುದ್ಧಿವಂತರಾಗಿದ್ದಾರೆ. ಆರ್ಎಸ್ಎಸ್ ಬ್ಯಾನ್ ಮಾಡುವ ಯೋಜನೆ ನಮ್ಮ ಸರ್ಕಾರಕ್ಕೆ ಇಲ್ಲ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಯಾಕೆ ಆ ಮಾತನ್ನ ಹೇಳಿದರು ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಕೇವಲ 66 ಸೀಟುಗಳನ್ನು ಪಡೆದಿದ್ದರೂ ಕೂಡ 0.6% ವೋಟ್ಗಳನ್ನು ಹೆಚ್ಚಿಗೆ ಪಡೆದಿದ್ದೇವೆ. ಮೈಸೂರು ಭಾಗದಲ್ಲೂ ಕೂಡ ಬಿಜೆಪಿ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಗೆ ಜನರು ಮತವನ್ನು ಚಲಾಯಿಸಿದ್ದಾರೆ. ಜಾತಿ ಲೆಕ್ಕಾಚಾರ ಮಾಡದೆ ಬಿಜೆಪಿಗೆ ಜನರು ಮತವನ್ನು ನೀಡಿದ್ದಾರೆ. ಇದು ಬಿಜೆಪಿಗೆ ಸಿಕ್ಕ ದೊಡ್ಡ ಜಯ ಎಂದು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದಿದ್ದಾರೆ.
