ಉದಯವಾಹಿನಿ, ಬೆಳಗಾವಿ: ‘ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಆಗುವ ಅರ್ಹತೆಯಿದೆ. ಅದಕ್ಕೆ ಕಾಲ ಕೂಡಿಬರಬೇಕು. ಅವರು ಇಂದಲ್ಲ, ನಾಳೆ ಮುಖ್ಯಮಂತ್ರಿ ಆಗುತ್ತಾರೆ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.ಸತೀಶ ಅವರಿಗೆ ಡಿಸಿಎಂ ಸ್ಥಾನ ಕೈತಪ್ಪಿದ ವಿಚಾರವಾಗಿ, ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಕುರಿತು ರಾಹುಲ್ ಗಾಂಧಿ ನೀಡಿದ ಭರವಸೆ ಈಡೇರಿಸುತ್ತೀರಾ ಎನ್ನುವ ಪ್ರಶ್ನೆಗೆ, ‘ನನಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಅಧಿಕೃತವಾಗಿ ಹಂಚಿಕೆಯಾಗಬೇಕು. ಅಧಿಕಾರ ಸ್ವೀಕರಿಸಿ, ಇಲಾಖೆವಾರು ಸಭೆಗಳನ್ನು ನಡೆಸಬೇಕು. ಆದರೆ, ನಾವು ನೀಡಿದ ವಾಗ್ದಾನ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ’ ಎಂದರು.
