ಉದಯವಾಹಿನಿ, ಬಂಕಾ : ಬಿಹಾರದ ಬಂಕಾ ಜಿಲ್ಲೆಯಲ್ಲಿ ತಡರಾತ್ರಿ ವಾಹನವೊಂದು ಹರಿದ ಪರಿಣಾಮ ಕನಿಷ್ಠ ನಾಲ್ವರು ಕನ್ವಾರಿಯಾಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಕನ್ವಾರಿಯಾಗಳು ಸುಲ್ತಂಗಂಜ್ ನಿಂದ ಗಂಗಾ ಜಲವನ್ನು ತೆಗೆದುಕೊಂಡು ಜೆಸ್ತ್ ಗೌರ್ ನಾಥ್ ಮಹಾದೇವ ದೇವಸ್ಥಾನಕ್ಕೆ ಹೋಗುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ಕನ್ವಾರಿಯಾಗಳಿಗೆ ವಾಹನ ಡಿಕ್ಕಿ ಹೊಡೆದಿದೆ ಸ್ಥಳದಲ್ಲೇ 4 ಜನರು ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಬಿಪಿನ್ ಬಿಹಾರಿ ತಿಳಿಸಿದ್ದಾರೆ. ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕಾಗಮಿಸಿದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವಿನಾಶ್ ಕುಮಾರ್ ಅವರು, ನಾವು ತಕ್ಷಣ ಸ್ಥಳಕ್ಕೆ ತಲುಪಿದೆವು… ಘಟನೆಯಲ್ಲಿ ಸುಮಾರು 10-11 ಜನರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ 4 ಜನರು ಸಾವನ್ನಪ್ಪಿದ್ದಾರೆ.
ಮೃತದೇಹಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಆಡಳಿತವು ಸಂಪೂರ್ಣವಾಗಿ ಸಹಕರಿಸುತ್ತಿದೆ ನಾವು ಘಟನೆಯ ಬಗ್ಗೆ ತನಿಖೆ ಮಾಡುತ್ತೇವೆ ಎಂದಿದ್ದಾರೆ.
ಏತನ್ಮಧ್ಯೆ, ಧಾರ್ಮಿಕ ಕ್ಷೇತ್ರದಿಂದ ಹಿಂತಿರುಗುತ್ತಿದ್ದ ಖಾಸಗಿ ಬಸ್ ಶುಕ್ರವಾರ ರಾತ್ರಿ ಯುಪಿಯ ಸಿದ್ಧಾರ್ಥನಗರದ ಧೆಬೇರುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಲರಾಮ್‌ಪುರ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದರಕ್ಕೆ ಉರುಳಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಬಲಿಯಾದವರೆಲ್ಲರೂ ಶೋಹರತ್‌ಗಢ್ ತೆಹಸಿಲ್‌ನ ಮಹಾಂಕೋಲಾ ಗ್ರಾಮದ ನಿವಾಸಿಗಳು.
