ಉದಯವಾಹಿನಿ, ರಾಯಚೂರು: ‘ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬಳಿಕ ಹರಿಯಾಣ ಸರ್ಕಾರ ಪ್ರಥಮವಾಗಿ ಸಚಿವ ಸಂಪುಟದಲ್ಲಿ ಜಾರಿ ಮಾಡಲು ನಿರ್ಣಯ ಕೈಗೊಂಡಿದಂತೆ ಕರ್ನಾಟಕ ಸರ್ಕಾರವೂವಿಳಂಬ ಮಾಡದೇ ಜಾರಿ ಮಾಡಿ ನುಡಿದಂತೆ ನಡೆದುಕೊಳ್ಳಬೇಕು’ ಎಂದು ಒಳಮೀಸಲಾತಿ ಹೋರಾಟಗಾರ ಎಂ.ವಿರೂಪಾಕ್ಷಿ ಒತ್ತಾಯಿಸಿದರು.
ಒಳ ಮೀಸಲಾತಿ ಕುರಿತು ಆಗಸ್ಟ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿ 2 ತಿಂಗಳಾದರೂ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ 6ನೇ ಗ್ಯಾರಂಟಿಯಾಗಿ ಸದಾಶಿವ ಆಯೋಗ ವರದಿ ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ 5 ಗ್ಯಾರಂಟಿ ಮಾತ್ರ ಈಡೇರಿಸಿದ್ದಾರೆ. 6ನೇ ಗ್ಯಾರಂಟಿ ಈಡೇರಿಸದಿದ್ದರೆ ರಾಜ್ಯ ಮಟ್ಟದ ಹೋರಾಟ ಮಾಡಲಾಗುವುದು ಎಂದು ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಸಿದರು.
70 ವರ್ಷ ಹೊಲೆಯ,ಮಾದಿಗ ಜಾತಿಗಳನ್ನು ಮತಬ್ಯಾಂಕ್ ಆಗಿ ಬಳಸಿಕೊಂಡ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಿ ಋಣ ತೀರಿಸದೇ ಸ್ಪಶ್ಯ ಜಾತಿಗಳ ಪರವಾದ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದೂರಿದರು.
