ಉದಯವಾಹಿನಿ, ಬೆಂಗಳೂರು: ನಗರ ಸಂಚಾರಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ನಗರದಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಂಡು 579 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಅ.14 ರಿಂದ 20ರವರೆಗೆ ಒಂದು ವಾರಗಳ ಕಾಲ ಕಾರ್ಯಚರಣೆ ಕೈಗೊಂಡು 49371 ವಿವಿಧ ಮಾದರಿಯ ವಾಹನಗಳನ್ನು ಸಂಚಾರಿ ಪೊಲೀಸರು ಪರಿಶೀಲಿಸಿ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ಸವಾರರು ಹಾಗೂ ಚಾಲಕರ ವಿರುದ್ಧ ಪ್ರಕರಣಗಳನ್ನು
ದಾಖಲಿಸಿಕೊಂಡಿದ್ದಾರೆ. ರಸ್ತೆ ಅಪಘಾತವನ್ನು ತಡೆಗಟ್ಟುವ ಸಲುವಾಗಿ ವಿಶೇಷ ಕಾರ್ಯಾಚರಣೆಯನ್ನು ಮುಂದಿನ ದಿನಗಳಲ್ಲಿ ನಿರಂತರವಾಗಿ ಹಮಿಕೊಳ್ಳಲಾಗುವುದೆಂದು ನಗರ ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!