ಉದಯವಾಹಿನಿ,ಬೆಂಗಳೂರು: ರಾಜ್ಯ ಸರಕಾರ ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು, ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತಿದ್ದು ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ.
ಕೇವಲ ಹಿಂದೂಗಳ ಹಬ್ಬ ದೀಪಾವಳಿಯಲ್ಲಿ ಸರಕಾರ ಪರಿಸರ ಮಾಲಿನ್ಯದ ಬೊಬ್ಬೆ ಹಾಕುತ್ತಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ವರ್ಷ ಪೂರ್ತಿ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಯಲು ಯಾವ ಕ್ರಮ ಕೈಗೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ ಶರತ್ ಕುಮಾರ್ ಪ್ರಶ್ನಿಸಿದ್ದಾರೆ.
ಗಣೇಶ ಚತುರ್ಥಿ ವೇಳೆಯೂ ಶಬ್ದ ಮಾಲಿನ್ಯದ ನೆಪವೊಡ್ಡಿ ಡಿಜೆಗೆ ನಿರ್ಬಂಧ ಹೇರಿತ್ತು, ಈಗ ಪುನಃ ದೀಪಾವಳಿಯ ಆಚರಣೆಗೆ ಕಡಿವಾಣ ಹಾಕಿದ್ದು ಕಾಂಗ್ರೆಸ್ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ. ಹಿಂದೂ ಸಮಾಜ ಇದನ್ನು ಎಂದಿಗೂ ಸಹಿಸುವುದಿಲ್ಲ. ಈ ಆದೇಶ ಕೂಡಲೇ ಹಿಂಪಡೆಯದಿದ್ದರೆ ಸಮಸ್ತ ಹಿಂದೂ ಸಂಘಟನೆಗಳು ಒಟ್ಟಾಗಿ ಪ್ರತಿಭಟನೆ ನಡೆಸಬೇಕಾಗುವುದು ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!