ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ಸೇರ್ಪಡೆಯಾ ಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿಗೆ ದ್ರೋಹ ಬಗೆದು ಹೋಗಿದ್ದಾರೆ. ಉಪಚುನಾವಣೆಯಲ್ಲಿ ಅವರಿಗೆ ಚನ್ನಪಟ್ಟಣದ ಜನತೆ ತಕ್ಕಪಾಠ ಕಲಿಸಲ್ಲಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್ಗೆ ಟಿಕೆಟ್ ಕೊಡಿಸಲು ಕೊನೆ ಕ್ಷಣದವರೆಗೂ ಸರ್ವ ಪ್ರಯತ್ನ ಮಾಡಿದೆವು. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಈಗ ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.
ಅಷ್ಟಕ್ಕೂ ಯೋಗೇಶ್ವರ್ ಬಿಜೆಪಿಯಿಂದ ಬಂದವರಲ್ಲ. ಅವರು ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಬಂದಿರಲಿಲ್ಲ. ಪಕ್ಷದಲ್ಲಿ ಇದ್ದು ಇಲ್ಲದಂತಿದ್ದರು. ಮೈತ್ರಿ ಪಕ್ಷಕ್ಕೆ ದ್ರೋಹ ಬಗೆದಿರುವ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.ಸಿ.ಪಿ.ಯೋಗೇಶ್ವರ್ ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂಬ ಸುದ್ದಿ ಇದೆ. ನಮ ಮಾತು ಕೇಳದೇ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ನಲ್ಲಿ ಯೋಗೇಶ್ವರ್ಗೆ ಖಂಡಿತ ಭ್ರಮನಿರಸನ ಆಗುತ್ತದೆ ಎಂದು ಭವಿಷ್ಯ ನುಡಿದರು.ನಾವೆಲ್ಲರೂ ಇದು ಜೆಡಿಎಸ್ ಟಿಕೆಟ್, ಹೆಚ್ಡಿಕೆ ಅವರೇ ತೀರ್ಮಾನ ಮಾಡಬೇಕು ಅಂತನೇ ಹೇಳಿಕೊಂಡು ಬಂದಿದ್ದೆವು.
