ಉದಯವಾಹಿನಿ,ಕಟಕ್ : ಇಂದು ಸಂಜೆ ದಾನಾ ಚಂಡ ಮಾರುತ ಅಬ್ಬರಿಸುವ ಸಾಧ್ಯತೆಗಳಿವೆ. ಹೀಗಾಗಿ ನಾಳೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೂರಾರು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಚಂಡಮಾರುತದಿAದ 2 ರಾಜ್ಯಗಳಲ್ಲಿ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ. 10 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ರೂಪುಗೊಂಡಿದೆ. ಇದು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯನ್ನು ಸಮೀಪಿಸುತ್ತಿದೆ. ನಾಳೆ ಭಿತರ್ಕಾನಿಕಾ ಪಾರ್ಕ್ ಮತ್ತು ಧಮ್ರಾ ಬಂದರಿನ ನಡುವೆ ಚಂಡಮಾರುತ ಪ್ರವೇಶಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಒಡಿಶಾ ಮತ್ತು ಬಂಗಾಳಕ್ಕೆ ಭಾರೀ ಮಳೆಯ ರೆಡ್ ಅಲರ್ಟ್ ಘೋಷಿಸಲಾಗಿದೆ.

ಒಡಿಶಾ ಮತ್ತು ಬಂಗಾಳದಲ್ಲಿ ಅತಿ ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಿದೆ. ಇಲಾಖೆ ಮುನ್ಸೂಚನೆಯ ಪ್ರಕಾರ, ಬಲೇಶ್ವರ್, ಮಯೂರ್‌ಭಂಜ್‌ನ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಒಡಿಶಾದ ಭದ್ರಲ್, ಕೇಂದ್ರಪಾರಾ, ಜಗತ್‌ಸಿಂಗ್‌ಪುರ್ ಕೆಂಡುಜಾರ, ಜಾಜ್‌ಪುರ್, ಕಟಕ್ ಮತ್ತು ಧೆಂಕನಲ್, ಖೋಡಾರ್ ಮತ್ತು ಪುರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕೋಲ್ಕತ್ತಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಂದು ಸಂಜೆ 6ರಿಂದ ನಾಳೆ ಬೆಳಿಗ್ಗೆ 9ರವರೆಗೆ ಸುಮಾರು 15 ಗಂಟೆಗಳ ಕಾಲ ಎಲ್ಲಾ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ. ಇದರ ಜೊತೆಗೆ, ಭುವನೇಶ್ವರ ವಿಮಾನ ನಿಲ್ದಾಣವು ಇಂದು ಸಂಜೆ 5ರಿಂದ ನಾಳೆ ಬೆಳಿಗ್ಗೆ 9ರವರೆಗೆ 16 ಗಂಟೆಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!