ಉದಯವಾಹಿನಿ, ಹಾಸನ: ವರ್ಷಕ್ಕೊಮೆ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ನಗರದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬೆಯ ಗರ್ಭಗುಡಿ ಬಾಗಿಲನ್ನು ಶಾಸೊ್ತ್ರೕಕ್ತವಾಗಿ ಇಂದು ತೆರೆಯಲಾಯಿತು.
ಅರಸು ವಂಶಸ್ಥರು ಬಾಳೆಕಂಬವನ್ನು ಕಡಿಯುವ ಮೂಲಕ 12.10ಕ್ಕೆ ಸರಿಯಾಗಿ ಗರ್ಭಗುಡಿಯ ಬಾಗಿಲನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ಶಾಸಕರಾದ ಎಚ್.ಪಿ.ಸ್ವರೂಪ್ ಪ್ರಕಾಶ್, ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್‌ಪಿ ಮಹಮದ್ ಸುಜೇತ ಸೇರಿದಂತೆ ಸೇರಿದಂತೆ ಜಿಲ್ಲಾಳಿತದ ಅಧಿಕಾರಿಗಳು, ದೇವಾಲದಯ ಆಡಳಿತ ಮಂಡಳಿ, ಮುಖಂಡರುಗಳ ಸಮುಖದಲ್ಲಿ ದೇವಾಲದಯ ಗರ್ಭಗುಡಿ ತೆರೆಯಲಾಯಿತು.
ಕಳೆದ ವರ್ಷ ಗರ್ಭಗುಡಿ ಮುಚ್ಚುವ ವೇಳೆ ಹಚ್ಚಲಾಗಿದ್ದ ದೀಪ ಹಾಗೂ ದೇವರ ಮುಂದೆ ಇಟ್ಟಿದ್ದ ಹೂವು, ನೈವೇದ್ಯ ಹಾಗೆಯೇ ಇತ್ತು.ಇಂದಿನಿಂದ ನ.3ರವರೆಗೆ ಹಾಸನಾಂಬೆಯ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮತ್ತು ನ.3 ರಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.ಮಳೆ ಹಾಗೂ ಬಿಸಿಲಿನಿಂದ ಆಶ್ರಯ ಪಡೆಯಲು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ. ದೇವಾಲಯ ಹಾಗೂ ಹೊರ ಹಾಗೂ ಒಳಭಾಗದಲ್ಲಿ ವಿವಿಧ ಬಗೆಯ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ.
