ಉದಯವಾಹಿನಿ, ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಆಗಿರುವ ಕೆಲಸ, ವೆಚ್ಚದ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ಬಿಬಿಎಂಪಿ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಲಹೆ, ಸೂಚನೆಗಳನ್ನು ನೀಡಿದ ಉಪ ಮುಖ್ಯಮಂತ್ರಿ, ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗರಿಗಳನ್ನು ಯತಾಸ್ಥಿತಿಯಲ್ಲಿ ತಡೆ ಹಿಡಿಯಬೇಕು. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕೆಲಸಗಳನ್ನು ತಡೆ ಹಿಡಿಯಬೇಕು. ಕೆಲಸ ಆಗದಿದ್ದರೂ ಬಿಲ್, ಒಂದೇ ಕಾಮಗಾರಿಗೆ ಎರಡೆರಡು ಬಿಲ್, ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿರುವ ಬಗ್ಗೆ ತನಿಖೆ ಮಾಡಿ 10 ದಿನದೊಳಗೆ ಪಟ್ಟಿ ನೀಡಬೇಕು ಎಂದರು.
