ಉದಯವಾಹಿನಿ, ಬೆಂಗಳೂರು: ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆಯಲ್ಲಿ ಕಾನೂನಿನ ಅರಿವು ಮೂಡಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟರು.
ಬೆಂಗಳೂರು ನಗರದ ಕನ್ನಡ ಭವನ ನಯನ ಸಭಾಂಗಣದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ “ಮಾಹಿತಿ ಹಕ್ಕು ದಿನಾಚರಣೆ” ಹಾಗೂ ಸಂಘಟನೆಯ “೫ ನೇ ವಾರ್ಷಿಕೋತ್ಸವ”ದ ಅಂಗವಾಗಿ ’ವಿಚಾರಕ್ರಾಂತಿ ರತ್ನ ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭಾಗವಹಿಸಿ ಮಾತನಾಡಿ, ಸಮಾಜದಲ್ಲಿ ನಡೆಯುತ್ತಿರುವ ಲಂಚ ಮತ್ತು ಭ್ರಷ್ಟಾಚಾರ ನಿಗ್ರಹಿಸಲು ಯುವ ಪೀಳಿಗೆ ಯಲ್ಲಿ ಕಾನೂನಿನ ಅರಿವು ಇರಬೇಕು ಹಾಗೂ ಯುವಕರು ಈ ಭ್ರಷ್ಟ ವ್ಯವಸ್ಥೆ ವಿರುದ್ದ ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.ನ್ಯಾಯ ಮಾರ್ಗದಿಂದ ಹಣ ಸಂಪಾದಿಸಬೇಕು ಅನ್ಯಾಯ ಮಾರ್ಗದಿಂದ ಸಂಪಾದಿಸಿದ ಹಣದಿಂದ ನೆಮ್ಮದಿ ದೊರಕುವುದಿಲ್ಲೆಂದರು. ಭ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ಹೋರಾಡುತ್ತಿರುವ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಬೆಟ್ಟಳ್ಳಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಮಾತನಾಡಿ, ಸಮಾಜದಲ್ಲಿನ ಭ್ರಷ್ಟಚಾರ ತಡೆಗಟ್ಟಲು ಗ್ರಾಮ ಪಂಚಾಯತಿ ಯಿಂದ ಪ್ರಾರಂಭವಾಗಿ ಪಾರ್ಲಿಮೆಂಟ್ ವರೆಗೆ ಭ್ರಷ್ಟಚಾರ ನಿರ್ಮೂಲನೆ ಅಭಿಯಾನ ಪ್ರಾರಂಭವಾಗಬೇಕು.ಹಾಗೂ ಸಾಮಾಜಿಕ ಹೋರಾಟಗಾರರು,ಮಾಹಿತಿ ಹಕ್ಕು ಕಾರ್ಯಕರ್ತರು ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುವುದರ ಮುಖಾಂತರ ಭ್ರಷ್ಟಚಾರದ ವಿರುದ್ದ ದ್ವನಿ ಯಾಗಬೇಕು ಎಂದು ಕರೆ ಕೊಟ್ಟರು. ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ವತಿಯಿಂದ ಸರ್ಕಾರದ ಖಜಾನೆಗೆ ಅಧಿಕಾರಿಗಳಿಂದ ದಂಡ ತುಂಬಿಸಿದ ಸಾಮಾಜಿಕ ಕಾರ್ಯಕರ್ತರಿಗೆ ’ವಿಚಾರಕ್ರಾಂತಿ ರತ್ನ ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
