ಉದಯವಾಹಿನಿ, ಬೆಂಗಳೂರು: ನಾಯಿಯೊಂದು ದ್ವಿಚಕ್ರ ವಾಹನಕ್ಕೆ ಅಡ್ಡಬಂದ ಪರಿಣಾಮ ಬೈಕ್ ಸವಾರಿ ಮಾಡುತ್ತಿದ್ದ ಯುವತಿ ಬೈಕ್ ಇಳಿದು ನಾಯಿಯನ್ನು ಕಲ್ಲಿನಿಂದ ಹೊಡೆದಿದ್ದಾಳೆ.ಇದರಿಂದ ಕೆರಳಿದ ನಾಯಿ ಮಾಲೀಕ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಯುವತಿ ದೂರು ದಾಖಲಿಸಿದ ಘಟನೆ ರಾಜಧಾನಿ ಬೆಂಗಳೂರಿನ ರಾಮಮೂರ್ತಿ ನಗರದ ಎನ್‌ಆರ್‌ಐ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ.ಯುವತಿ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.ಇದಕ್ಕೆ ಪ್ರತಿಯಾಗಿ ಯುವಕ ಸಹ ಪೋಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ದೂರು ದಾಖಲಿಸಿದ್ದಾನೆ. ನಾಯಿಗೆ ಕಲ್ಲಿನಿಂದ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವತಿ ನನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಯುವಕ ದೂರಿನಲ್ಲಿ ಉಲ್ಲೇಖಿಸಿದ್ದಾನೆ.
