ಉದಯವಾಹಿನಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದ ಗ್ರಾಮಭಾರತಿ ಶಿಕ್ಷಣ ಸಮಿತಿಯ ಎಸ್ ಎಸ್ ಕೂಡ್ಲುಮಠ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗದುಗಿನ ಕೆಎಚ್ ಪಾಟೀಲ್ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಾದ ಲಕ್ಷ್ಮಿ ಎನ್ ಬಾಳಿ ಕಾಯಿ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಮಂಜುನಾಥ್ ಎಲ್ ಹಳೆ ರಿತ್ತಿ ಸರಪಳಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಕೆ ಆರ್ ಲಮಾಣಿ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಚೇರ್ಮನ್ನರಾದ ಎಸ್ ಪಿ ಬಳಿಗಾರ ಕಾರ್ಯದರ್ಶಿ ಸಿಎಂ ರಾಗಿ ಮುಖ್ಯೋಪಾಧ್ಯಾಯರಾದ ಸಿಬಿ ಮೊಗಲಿ ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
