ಉದಯವಾಹಿನಿ, ತಿರುಪತಿ: ತಿರುಪತಿಯಲ್ಲಿರುವ ಹಲವಾರು ಹೋಟೆಲ್‌‍ಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಬಂದ ಬೆನ್ನಲ್ಲೇ ಇದೀಗ ಅಲ್ಲಿನ ಇಸ್ಕಾನ್‌ ದೇವಸ್ಥಾನಕ್ಕೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಹಿನ್ನೆಲೆಯಲ್ಲಿ ದೇಗುಲದ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪಾಕಿಸ್ತಾನದ ಐಎಎಸ್‌‍ಐ ಜತೆ ನಂಟು ಹೊಂದಿರುವ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ದೇಗುಲದ ಸಿಬ್ಬಂದಿಗೆ ಇ-ಮೇಲ್‌ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.
ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ, ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡಗಳು ಸ್ಥಳಕ್ಕೆ ತಲುಪಿದ್ದು, ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ. ಆದರೆ, ದೇವಸ್ಥಾನದ ಆವರಣದಲ್ಲಿ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ.

ಅಕ್ಟೋಬರ್‌ 26 ರಂದು, ಆಗಂತುಕರು ತಿರುಪತಿಯ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದರು. ಬಾಂಬ್‌ ಇಟ್ಟಿರುವುದಾಗಿ ಇ-ಮೇಲ್‌ ಕಳುಹಿಸಿದ್ದರು. ಇದರಿಂದ ಎಚ್ಚೆತ್ತ ಪೊಲೀಸರು ನಗರದ ಪ್ರತಿ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ್ದರು. ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಂಪೂರ್ಣ ಶೋಧದ ನಂತರ ಪೋಲಿಸರು ಹುಸಿ ಬಾಂಬ್‌ ಕರೆ ಎಂದು ದಢಪಡಿಸಿದ್ದರು.

 

Leave a Reply

Your email address will not be published. Required fields are marked *

error: Content is protected !!