ಉದಯವಾಹಿನಿ, ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ತೆರಳಿದ್ದ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿರುವ ಘಟನೆ ನಡೆದಿದೆ.
ಈ ಸಂಬಂಧ ಮಾಜಿ ಸರಪಂಚ್‌ನ (ಗ್ರಾಮ ಮುಖ್ಯಸ್ಥ) 21 ವರ್ಷದ ಮಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಸಂತ್ರಸ್ತೆ ಮೊಖಾಡ ತಾಲೂಕಿನ ಗ್ರಾಮದ ನಿವಾಸಿಯಾಗಿದ್ದು, ಗ್ರಾಮದಲ್ಲಿ ತನ್ನ ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದು ಮನೆಗೆ ವಾಪಸ್ಸಾಗಿರಲಿಲ್ಲ. ನಂತರ ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದರು.
ನಂತರ ಗ್ರಾಮದ ಸಶಾನದ ಬಳಿ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಪೊಲೀಸರು ಮತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಾಲಕಿಯ ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ ಎಂದು ಮೊಖಾಡ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಪ್ರೇಮನಾಥ್ ಧೋಲೆ ತಿಳಿಸಿದ್ದಾರೆ.
