ಉದಯವಾಹಿನಿ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸರ್ಕಾರವು ಸಿದ್ಧತೆ ನಡೆಸಿದ್ದು, ಮುಂದಿನ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ 5 ಇಲಾಖೆಗಳ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.ಜೂನ್ 1 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸಂಬಂಧ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 5 ಗ್ಯಾರಂಟಿ ಯೋಜನೆ ಜಾರಿಗೆ ತರುವ ಸಂಬಂಧ ಅಧಿಕಾರಿಗಳಿಗೆ ಡೇಟಾ ಸಂಗ್ರಹಣೆ ಮಾಡುವಂತೆ ಹಾಗೂ ಗ್ಯಾರಂಟಿ ಯೋಜನೆಗಳ ಜಾರಿಗೆ ಎಷ್ಟು ಹಣ ಬೇಕು? ಯಾವ ರೀತಿ ಯೋಜನೆಗಳನ್ನು ಜಾರಿಗೆ ತರಬೇಕು? ಮಹಿಳೆಯರಿಗೆ 2,000 ರೂ. ನೀಡಲು ಅಂಕಿ-ಅಂಶಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್​.​ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದು, 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಿದ್ದರು.ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು
ಗೃಹಲಕ್ಷ್ಮಿ ಯೋಜನೆ – ಪ್ರತಿತಿಂಗಳು ಮಹಿಳೆಯರಿಗೆ 2 ಸಾವಿರ ರೂ.
ಗೃಹಜ್ಯೋತಿ- 200 ಯುನಿಟ್ ವಿದ್ಯುತ್ ಉಚಿತ
ಅನ್ನಭಾಗ್ಯ-10 ಕೆಜಿ ಅಕ್ಕಿ ಉಚಿತ
ಶಕ್ತಿ-ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ
ಯುವನಿಧಿ- ಪದವಿಧರರಿಗೆ 3,000 ರೂ. ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ.ಸಿಗಲಿದೆ.

Leave a Reply

Your email address will not be published. Required fields are marked *

error: Content is protected !!