ಉದಯವಾಹಿನಿ, ಕೋಲಾರ: ಗಡಿನಾಡು ಜಿಲ್ಲೆಯಲ್ಲಿ ಶುಕ್ರವಾರ ಕನ್ನಡದ್ದೇ ಕಲರವ. 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ಕನ್ನಡ ಕಹಳೆ ಮೊಳಗಿಸಲಾಯಿತು. ಎಲ್ಲೆಲ್ಲೂ ಕನ್ನಡ ಧ್ವಜಗಳು ರಾರಾಜಿಸಿದವು.ನಗರದ ಗಾಂಧಿವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀಭುವನೇಶ್ವರಿ ಕನ್ನಡ ಸಂಘ ಹಾಗೂ ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಚಾಲನೆ ನೀಡಿದರು.
ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಬಳಿಕ ಮಾತನಾಡಿ, ‘ಕರ್ನಾಟಕದಲ್ಲಿ ನೆಲೆಸಿರುವ ನಾವೆಲ್ಲರೂ ಕನ್ನಡಿಗರು. ನಮ್ಮ ಮನೆಗಳಲ್ಲಿ ಯಾವುದೇ ಭಾಷೆ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವನ್ನು ಪ್ರಥಮ ಆದ್ಯತೆಯಾಗಿ ತೆಗೆದುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು’ ಎಂದರು.
‘ಕೋಲಾರ ಜಿಲ್ಲೆಯು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಜೊತೆಗೆ ಗಡಿ ಪ್ರದೇಶ ಹಂಚಿಕೊಂಡಿದೆ.
