ಉದಯವಾಹಿನಿ ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರೇ ನಿಮ್ಮ ಸಚಿವರ ಪಿಎ ಹೆಸರು ಡೆತ್ ನೋಟ್ ನಲ್ಲಿ ಬರೆದಿಟ್ಟು ಬೆಳಗಾವಿಯ ತಹಶೀಲ್ದಾರ್ ಕಚೇರಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.ಇಂದು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ಸುಳ್ಳು ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ಅಘೋಷಿತ “ಸಾವು ಗ್ಯಾರೆಂಟಿ” ಯೋಜನೆ ಎಂಬುದಾಗಿ ಗುಡುಗಿದ್ದಾರೆ.ಬೆಳಗಾವಿಯ ಎಫ್.ಡಿ.ಎ ರುದ್ರಣ್ಣ ಯಡವಣ್ಣನವರ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಸೋಮು ಹಾಗೂ ತಹಶೀಲ್ದಾರ್‌ ಬಸವರಾಜ್‌ ನಾಗರಾಳ್‌ ಅವರೆ ತಮ್ಮ ಸಾವಿಗೆ ಕಾರಣ ಎಂದು ಡೆತ್‌ ನೋಟ್‌ ಬರೆದಿಟ್ಟು ತಹಶೀಲ್ದಾರ್‌ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದ್ದಾರೆ.ಮಾನ್ಯ ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಸರ್ಕಾರದ ಧನದಾಹಕ್ಕೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು..?? ರಾಜ್ಯ ಸರ್ಕಾರ ವಕ್ಫ್ ಹೆಸರಲ್ಲಿ ರೈತರ, ದಲಿತರ ಜಮೀನು ಕಬಳಿಸತ್ತಿರುವುದು ಒಂದೆಡೆಯಾದರೆ ರೈತರು, ಕಾರ್ಮಿಕರು, ಸರ್ಕಾರಿ ಅಧಿಕಾರಿಗಳ ಜೀವ ತಿನ್ನುತ್ತಿದೆ.

Leave a Reply

Your email address will not be published. Required fields are marked *

error: Content is protected !!