ಉದಯವಾಹಿನಿ  ಬೆಂಗಳೂರು : ವಕ್ಫ್ ವಿವಾದ ವಿಚಾರವಾಗಿ ಇದೀಗ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಇದರ ಮಧ್ಯ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ಪದಾಧಿಕಾರಿಗಳು ಆಕ್ರೋಶಗೊಂಡಿದ್ದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಕುರಿತು ದೂರು ನೀಡಿದ್ದಾರೆ.ಕಾಂಗ್ರೆಸ್ ಶಾಸಕರು ಬರೆದಿರವುದು ಎನ್ನಲಾದ ಪತ್ರ ಪ್ರತಿಯೊಂದು ಸದ್ಯ ವಾಟ್ಸ್​ಆಯಪ್ ಗ್ರೂಪ್​ಗಳಲ್ಲಿ ಹರಿದಾಡುತ್ತಿದೆ.ಹೌದು ವಕ್ಫ್​​ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈಗಿನ ಬೆಳವಣಿಗೆಗಳಿಗೆಲ್ಲ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಅನಗತ್ಯ ಹೇಳಿಕೆ ನೀಡದಂತೆ ಪತ್ರ ಬರೆದಿದ್ದಾರೆ.ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ. ಶಿಗ್ಗಾವಿ ಉಪಚುನಾವಣೆ ಅಭ್ಯರ್ಥಿ ವಿಷಯವಾಗಿಯೂ ಅನಗತ್ಯ ಗೊಂದಲ ಸೃಷ್ಟಿ ಮಾಡಿದ್ದರು. ನಮ್ಮಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಶಾಸಕರಿದ್ದಾರೆ, ಆದರೆ ಜಮೀರ್ ಮಾತ್ರ ವಿಶೇಷವಾಗಿ ನಡೆದುಕೊಳ್ಳುತ್ತಿದ್ದಾರೆ.ತಾವು ಮಧ್ಯಪ್ರವೇಶಿಸಿ ಜಮೀರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಖರ್ಗೆಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಉಲ್ಲೇಖಿಸಿದ್ದಾರೆ.ಸದ್ಯ ಉಪಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ತಾನೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಮೀರ್ ವಿರುದ್ಧ ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ ಕೈ ಶಾಸಕರು, ಜಮೀರ್ ಹೇಳಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!