ಉದಯವಾಹಿನಿ, ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿಗೆ ಸಂಬಂಧ ಸಾಲು ಸಾಲು ಸಭೆಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯಾಧ್ಯಂತ ಪ್ರತಿಭಟನೆಯ ಎಚ್ಚರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.ಕಾಂಗ್ರೆಸ್ ಘೋಷಿಸಿದಂತ ಗ್ಯಾರಂಟಿ ಜಾರಿಗಾಗಿ ಕಸರತ್ತು ನಡೆಸುತ್ತಿದೆ. ಯೋಜನೆಯ ಜಾರಿಗಾಗಿ ಸಂಪನ್ಮೂಲ ಕ್ರೂಢೀಕರಣಕ್ಕೂ ಮುಂದಾದಿಗೆ ಎಂದು ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗೆ ಮಾಡಿದ್ರೇ ರಾಜ್ಯಾಧ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದ್ದಾರೆ.
