ಉದಯವಾಹಿನಿ, ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ೫೦ ಶಾಸಕರನ್ನು ತಲಾ ೫೦ ಕೋಟಿ ರೂ.ಗೆ ಖರೀದಿಸಲು ಬಿಜೆಪಿ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಸ್ಫೋಟಕ ಹೇಳಿಕೆ ರಾಜಕೀಯ ಸಂಚಲನ ಸೃಷ್ಟಿಸಿ ವಾಕ್ಸಮರ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.ಮುಖ್ಯಮಂತ್ರಿಗಳ ಹೇಳಿಕೆ ಸುಳ್ಳು, ಈ ಬಗ್ಗೆ ತನಿಖೆ ನಡೆಸಿ ಎಂದು ಬಿಜೆಪಿ ಸವಾಲು ಹಾಕಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿಯ ರಾಜಕೀಯ ಹೇಳಿಕೆ ಕೊಟ್ಟಿದ್ದಾರೆ. ಅವರಿಗೆ ನಿಜವಾಗಲೂ ಬದ್ಧತೆ ಇದ್ದರೆ ಈ ಬಗ್ಗೆ ತನಿಖೆ ನಡೆಸಿ ಸತ್ಯ ಏನೆಂಬುದನ್ನು ಜನತೆಯ ಮುಂದೆ ಇಡಲಿ ಎಂದು ಬಿಜೆಪಿ ಆಗ್ರಹಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿ ಬಿಜೆಪಿ ಮೇಲೆ ಸುಳ್ಳು ಆರೋಪವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರದೇ ಸರ್ಕಾರವಿದೆ. ತನಿಖೆ ನಡೆಸಲಿ ಎಂದು ಒತ್ತಾಯಿಸಿ, ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಈ ರೀತಿ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಯಾವುದೇ ಶಾಸಕರನ್ನು ಖರೀದಿಸಲು ಮುಂದಾಗಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನೂ ನಡೆಸಿಲ್ಲ ಎಂದು ಬಿಜೆಪಿ ನಾಯಕರುಗಳು ಸ್ಪಷ್ಟಪಡಿಸಿದ್ದಾರೆ.

ಶಾಸಕರನ್ನು ಖರೀದಿಸಲು ಅವರೇನೂ ಕುದುರೆ, ಕತೆ, ದನಾನಾ ಎಂದು ಪ್ರಶ್ನಿಸಿರುವ ಬಿಜೆಪಿಯ ಸಿ.ಟಿ ರವಿ ಅವರು ಬದ್ಧತೆ ಇರುವ ಯಾವುದೇ ಶಾಸಕರನ್ನು ಕತ್ತೆ, ಕುದುರೆಗಳಂತೆ ಖರೀದಿಸಲು ಸಾಧ್ಯನಾ..? ರಾಜಕೀಯ ಲಾಭ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಸುಳ್ಳು ಇದು ನಿಜವೇ ಆದಲ್ಲಿ ಯಾರು ಯಾವಾಗ ಎಲ್ಲಿ ಯಾರನ್ನು ಖರೀದಿಸಲು ಪ್ರಯತ್ನಿಸಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿ ಈ ಬಗ್ಗೆ ತನಿಖೆ ನಡೆಸಿ ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!