ಉದಯವಾಹಿನಿ, ಕಲಬುರ್ಗಿ: ರಾಜ್ಯದಲ್ಲಿ ಸ್ವಚ್ಛ ಮತ್ತು ದಕ್ಷ ಆಡಳಿತವನ್ನು ನೀಡುವುದೇ ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮಗಳ ಬಗ್ಗೆ ತನಿಖೆ ನಡೆಸುವ ಮೂಲಕ 6ನೇ ಗ್ಯಾರಂಟಿ ಜಾರಿ ಮಾಡಲಾಗುತ್ತದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ .ಕಲಬುರ್ಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಕೆಕೆಆರ್ ಡಿಬಿ ಅಕ್ರಮದ ಬಗ್ಗೆ ತನಿಖೆ ಆರಂಭವಾಗಿದೆ. ಅಕ್ರಮಗಳ ಬಗ್ಗೆ ತನಿಖೆ ನಡೆಸುವ ಮೂಲಕ ಆರನೇ ಗ್ಯಾರಂಟಿ ಜಾರಿಯ ಯೋಜನೆ ರೂಪಿಸಲಾಗುತ್ತಿದೆ ಎಂದರು. ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಆಗಲೇ ಬೇಕು. ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಿದೆ. ನಮ್ಮ ಮಕ್ಕಳು ನಿಜವಾದ ವಿಶ್ವವಿದ್ಯಾಲಯದಲ್ಲಿ ಬೆಳೆಯಬೇಕು. ಆದ್ರೇ ಬಿಜೆಪಿ ವಾಟ್ಸಾಪ್ ಗ್ರೂಪ್ ನಲ್ಲಿ ಬೆಳೆಯಬಾರದು ಎಂದು ಹೇಳಿದರು.ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತದೆ. 40 ಪರ್ಸೆಂಟ್ ಭ್ರಷ್ಟಾಚಾರ ತಡೆದರೆ ಸಾಕಷ್ಟು ಆದಾಯ ಉಳಿಯುತ್ತದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!