ಉದಯವಾಹಿನಿ, ಲಂಡನ್ : ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.ಇದೀಗ ದಾಖಲೆ ಮೊತ್ತಕ್ಕೆ ಹರಾಜಾಗಿದೆ. ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ.
ಟಿಪ್ಪು 1799 ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದರು.ಖಡ್ಗವು ವಿಶಿಷ್ಟವಾದ ಹುಲಿ ಪಟ್ಟೆ ವಿನ್ಯಾಸವನ್ನ ಒಳಗೊಂಡಿದೆ. ಖಡ್ಗದ ಮೇಲೆ ಅರೇಬಿಕ್ ಅಕ್ಷರದಲ್ಲಿ ಕೆತ್ತಲಾಗಿದೆ.
ಕತ್ತಿಯನ್ನು ಉಡುಗೊರೆಯಾಗಿ ಪಡೆದಿದ್ದ ಡಿಕ್ 75 ನೇ ಹೈಲ್ಯಾಂಡ್ ರೆಜಿಮೆಂಟ್ ಆಫ್ ಫೂಟ್‌ನಲ್ಲಿ ಸೆರಿಂಗಪಟ್ಟಂನಲ್ಲಿ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸಿದ್ದರು. ಯುದ್ಧದ ನಂತರ ಟಿಪ್ಪುವಿನ ದೇಹವನ್ನು ಹುಡುಕುವಲ್ಲಿ ಅವನ ರೆಜಿಮೆಂಟ್ ಸಹಾಯ ಮಾಡಿತ್ತು 1782 ರಿಂದ 1799 ರವರೆಗೆ ಟಿಪ್ಪು ಸುಲ್ತಾನ್ ಮೈಸೂರು ರಾಜ್ಯವನ್ನ ಆಳ್ವಿಕೆ ಮಾಡಿದ್ದರು. ಮೈಸೂರು ಹುಲಿ ಎಂದೇ ಪ್ರಖ್ಯಾತಿ ಗಳಿಸಿದ್ದರು

Leave a Reply

Your email address will not be published. Required fields are marked *

error: Content is protected !!