ಉದಯವಾಹಿನಿ, ಮಮಡಿಕೇರಿ: ಉದ್ಯಮಿಯೊಬ್ಬರು ತಮ್ಮ ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕೊಪ್ಪ ನಿವಾಸಿ ಸುರೇಶ್ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಪತ್ನಿ ಪಲ್ಲವಿ (28) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಪೊಲೀಸರು ಕೂಡ ಶಂಕೆ ವ್ಯಕ್ತಪಡಿಸಿದ್ದಾರೆ. ಸುರೇಶ್‌ ಅವರು ಡೆತ್‌ನೋಟ್‌ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖಿಸಿದ್ದಾರೆ. ಸ್ಥಳಕ್ಕೆ ಬೈಲುಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!