ಉದಯವಾಹಿನಿ, ಬೆಂಗಳೂರು: ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಬೆಂಗಳೂರಿನ ಟ್ರಾಫಿಕ್ ಕುಖ್ಯಾತಿ ಎಷ್ಟಿದೆ ಎಂದರೆ ಈಗಾಗಲೇ ಬೆಂಗಳೂರು ಟ್ರಾಫಿಕ್ ಜಾಮ್ ಕುರಿತು ಸಾಕಷ್ಟು ಮೀಮ್ ಗಳು, ಜೋಕ್ ಗಳು, ಶಾರ್ಟ್ ಸ್ಟೋರಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹುಡುಗನೋರ್ವ ಬೆಂಗಳೂರು ಟ್ರಾಫಿಕ್ ನಲ್ಲಿ ಯುವತಿಯೊಬ್ಬಳನ್ನು ನೋಡಿ ಆಕೆಯನ್ನು ಅಲ್ಲೇ ಪ್ರೀತಿ, ಮದುವೆಯಾಗಿ ಮಕ್ಕಳಾದರೂ ಟ್ರಾಫಿಕ್ ಮಾತ್ರ ಕ್ಲಿಯರ್ ಆಗಿರಲಿಲ್ಲ ಎಂಬ ಜೋಕ್ ಗಳು ಈಗಾಗಲೇ ಸಾಕಷ್ಟು ಖ್ಯಾತಿ ಪಡೆದಿವೆ. ಈ ಪಟ್ಟಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದ್ದು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
