ಉದಯವಾಹಿನಿ, ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.ಕಾಂಗ್ರೆಸ್ ಹಾಗೂ ಮುಸ್ಲಿಂರ ವಿರುದ್ಧ ರಕ್ತ ಕ್ರಾಂತಿ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.
ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ ಸಿದ್ದೇಗೌಡ ಹೆಚ್.ಎಂ. ರವರು ಸ್ವಯಂ ಪ್ರೇರಿತ ದೂರು ನೀಡಿದ್ದು, ಈಶ್ವರಪ್ಪರ ವಿರುದ್ಧ ಕಲಂ 196(1)(a), 299BNS ನಂತೆ ಪ್ರಕರಣ ದಾಖಲಾಗಿದೆ.
ನ.13ರಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೆ.ಎಸ್.ಈಶ್ವರಪ್ಪ, ವಕ್ಫ್ ವಿಚಾರವಾಗಿ ಮುಸ್ಲಿಂರ ವಿರುದ್ಧ ಮಾತನಾಡಿದ್ದರು. ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಮರಿಗೆ ರಸ್ತೆಯಲ್ಲಿ ಹುಡುಕಿ ಹೊಡೆಯಬೇಕಾಗುತ್ತದೆ ಎಂದು ಕಿಡಿಕಾರಿದ್ದರು. ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
