ಉದಯವಾಹಿನಿ, ಹನೂರು : ಶಾಲಾ ಕಾಲೇಜು ವಿದ್ಯಾರ್ಥಿಗಳು ನಿಗಧಿತ ಸಮಯಕ್ಕೆ ಶಾಲಾ- ಕಾಲೇಜುಗಳಿಗೆ ತೆರಳಲು ಸಾರಿಗೆ ಬಸ್ ನಿಲ್ಲಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಆಗ್ರಹಿಸಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬೆಳಗ್ಗೆ ಜರುಗಿತು.
ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಸಾರಿಗೆ ಬಸ್ ಗಳು ನಿಲ್ಲಿಸುತ್ತಿಲ್ಲ ಎಂದು ಆಗ್ರಹಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೆÇಲೀಸರು ವಿದ್ಯಾರ್ಥಿಗಳ ಮನವೊಲಿಸಿದರು ಆದರೂ ಪಟ್ಟು ಬಿಡದ ವಿಧ್ಯಾರ್ಥಿಗಳು ಸಂಬಂಧ ಪಟ್ಟ ಸಾರಿಗೆ ಬಸ್ ವ್ಯವಸ್ಥಾಪಕರು ಆಗಮಿಸುವಂತೆ ಆಗ್ರಹಿಸಿದರು. ಪ್ರತಿಭಟಿಸಿದರು.
ಒಂದು ಗಂಟೆಗಳ ಕಾಲ ಬಸ್ ತಡೆದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಕಾಮಗೆರೆ ಮುಖ್ಯ ರಸ್ತೆಯಲ್ಲಿ ದಿನನಿತ್ಯ ನೂರಾರು ಸಾರಿಗೆ ಬಸ್ ಗಳು ಸಂಚಾರ ಮಾಡುತ್ತವೆ. ಆದರೆ ಬಸ್ಸು ನಿಲ್ಲಿಸುವುದಿಲ್ಲ ಇದರಿಂದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತದೆ ಎಂದು ಪ್ರತಿಭಟಿಸಿದರು.
ಮಾರ್ಗವಾಗಿ ಬರುತ್ತಿದ್ದ ಶಾಸಕ ಮಂಜುನಾಥ್ ಅವರು ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದರು. ಇದರ ಬಗ್ಗೆ ಸಂಬಂಧಪಟ್ಟ ಸಾರಿಗೆ ಬಸ್ ವ್ಯವಸ್ಥಾಪಕರ ಜೊತೆ ಮಾತನಾಡಿ. ಸಾರಿಗೆ ಬಸ್ ನಿಲ್ಲಿಸುವಂತೆ ತಿಳಿಸಲಾಗುವುದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟು ಶಾಲಾ ಕಾಲೇಜುಗಳಿಗೆ ತೆರಳಿದರು.
