ಉದಯವಾಹಿನಿ, ಬೆಂಗಳೂರು: 2023-24 ಸಾಲಿನಲ್ಲಿ ಗ್ರೂಪ್ ಎ, ಬಿ, ಸಿ ಡಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ರಾಜ್ಯ ಸರ್ಕಾರ ಅಧಿಕಾರ ನೀಡಿದೆ. ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗೊಳಪಟ್ಟು ಮಾಡಬಹುದಾಗಿದೆ. ಜೂ.1 ರಿಂದ ಜೂ.15 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೇಮಲತ ಜಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!