ಉದಯವಾಹಿನಿ, ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿಗೊಳಿಸಿದೆ. ಬರುವ ಡಿಸೆಂಬರ್ ೩ ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್ ನೀಡಿದ್ದಾರೆ.
ಇ.ಡಿ ದಾಳಿಯ ಬಳಿಕ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.
