ಉದಯವಾಹಿನಿ, ಇಂಗ್ಲೆಂಡ್ ವಿರುದ್ಧದ ಮೊದಲ ಮೂರು ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡಿದ್ದ ವೆಸ್ಟ್ ಇಂಡೀಸ್ ತಂಡ 4ನೇ ಪಂದ್ಯವನ್ನು 5 ವಿಕೆಟ್ಗಳಿಂದ ಗೆದ್ದುಕೊಳ್ಳುವುದರೊಂದಿಗೆ ವೈಟ್ ವಾಶ್ ಮುಜುಗರದಿಂದ ಪಾರಾಗಿದೆ. ಸೇಂಟ್ ಲೂಸಿಯಾದ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ 219 ರನ್‌ಗಳ ಸವಾಲ ನೀಡಿತು. ಈ ಗುರಿ ಬೆನ್ನಟ್ಟಿದ ವಿಂಡೀಸ್ 6 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.
ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ವಿಂಡೀಸ್ ಗೆಲುವಿನ ಖಾತೆ ತೆರೆದಿದೆ. ಆದರೆ ಈಗಾಗಲೇ ಸರಣಿ ಗೆದ್ದಿರುವ ಇಂಗ್ಲೆಂಡ್ಗೆ ಈ ಸೋಲು ಹೆಚ್ಚು ವ್ಯತ್ಯಾಸವನ್ನುಂಟು ಮಾಡದು. ಆದಾಗ್ಯೂ ಈ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 219 ರನ್‌ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿದ ವಿಂಡೀಸ್ ತನ್ನ ತವರು ನೆಲದಲ್ಲಿ 7 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ವಿಂಡೀಸ್ ಗೆಲುವಿನ ಖಾತೆ ತೆರೆದಿದೆ. ಆದರೆ ಈಗಾಗಲೇ ಸರಣಿ ಗೆದ್ದಿರುವ ಇಂಗ್ಲೆಂಡ್ಗೆ ಈ ಸೋಲು ಹೆಚ್ಚು ವ್ಯತ್ಯಾಸವನ್ನುಂಟು ಮಾಡದು. ಆದಾಗ್ಯೂ ಈ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 219 ರನ್‌ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟಿದ ವಿಂಡೀಸ್ ತನ್ನ ತವರು ನೆಲದಲ್ಲಿ 7 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ವಾಸ್ತವವಾಗಿ ವೆಸ್ಟ್ ಇಂಡೀಸ್ 2017 ರಲ್ಲಿ ಭಾರತ ವಿರುದ್ಧ ತವರು ನೆಲದಲ್ಲಿ 194 ರನ್‌ಗಳ ಗುರಿಯನ್ನು ಬೆನ್ನಟ್ಟಿತ್ತು. ಇದು ವಿಂಡೀಸ್ ತನ್ನ ತವರಿನಲ್ಲಿ ಬೆನ್ನಟ್ಟಿದ ಅತ್ಯಧಿಕ ಮೊತ್ತವಾಗಿತ್ತು. ಆದರೀಗ, ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗೆ 221 ರನ್ ಗಳಿಸಿ 219 ರನ್‌ಗಳ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ತನ್ನ 7 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ. ವಾಸ್ತವವಾಗಿ ವೆಸ್ಟ್ ಇಂಡೀಸ್ 2017 ರಲ್ಲಿ ಭಾರತ ವಿರುದ್ಧ ತವರು ನೆಲದಲ್ಲಿ 194 ರನ್‌ಗಳ ಗುರಿಯನ್ನು ಬೆನ್ನಟ್ಟಿತ್ತು. ಇದು ವಿಂಡೀಸ್ ತನ್ನ ತವರಿನಲ್ಲಿ ಬೆನ್ನಟ್ಟಿದ ಅತ್ಯಧಿಕ ಮೊತ್ತವಾಗಿತ್ತು. ಆದರೀಗ, ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗೆ 221 ರನ್ ಗಳಿಸಿ 219 ರನ್‌ಗಳ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ತನ್ನ 7 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ.
