ಉದಯವಾಹಿನಿ, ವಿಜಯಪುರ: ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೭ ಗ್ರಾಮಗಳಲ್ಲಿ ಕೆ.ಆರ್.ಐ.ಡಿ.ಎಲ್. ಮತ್ತು ಮುಖ್ಯಮಂತ್ರಿ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿಯಲ್ಲಿ ೭೧ ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆಗಳು ಮತ್ತು ಚರಂಡಿಗಳ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.
ಭಟ್ರೇನಹಳ್ಳಿ ಸಾಯಿಬಾಬಾ ದೇವಾಲಯದ ಮುಂಭಾಗದಲ್ಲಿ ಕೆ.ಆರ್.ಐ.ಡಿ.ಎಲ್. ಯೋಜನೆಯಡಿ ಸಿ.ಸಿ ಚರಂಡಿ ಕಾಮಗಾರಿಗೆ ೭ ಲಕ್ಷ, ವೆಂಕಟೇನಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ೭ ಲಕ್ಷ, ಗೊಡ್ಲುಮುದ್ದೇನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಿ.ಸಿ.ರಸ್ತೆ ಮತ್ತು ಚರಂಡಿ ಕಾಮಗಾರಿಗೆ ೭ ಲಕ್ಷ, ಮುಖ್ಯಮಂತ್ರಿ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ಎ.ರಂಗನಾಥಪುರ ಗ್ರಾಮದಲ್ಲಿ ದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ೧೦ ಲಕ್ಷ, ಚಂದೇನಹಳ್ಳಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ೧೦ ಲಕ್ಷ, ನಾರಾಯಣಪುರ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ೧೦ ಲಕ್ಷ, ಚಿನುವಂಡನಹಳ್ಳಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ೧೦ ಲಕ್ಷ, ಗೊಡ್ಲುಮುದ್ದೇನಹಳ್ಳಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ೧೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಚಾಲನೆ ನೀಡಿದರು.
ಈ ವೇಳೆ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಇನ್ ಪೋಸಿಸ್ ಸಂಸ್ಥೆಯವರಿಂದ ಸಿ.ಎಸ್.ಆರ್ ಅನುದಾನದಡಿ ೩೦ ಗ್ರಾಮ ಪಂಚಾಯಿತಿಗಳಲ್ಲಿ ತಲಾ ೧ ಕೋಟಿ ವೆಚ್ಚದಲ್ಲಿ ಕಾಂಪೌಂಡ್, ಶೌಚಾಲಯ, ಕುಡಿಯುವ ನೀರು, ಶಾಲಾ ಕಟ್ಟಡ, ಗ್ರಂಥಾಲಯ, ಆಟದ ಪರಿಕರಗಳನ್ನು ಒದಗಿಸುವುದಕ್ಕೆ ಯೋಜನೆ ರೂಪಿಸಲಾಗಿದೆ.
