ಉದಯವಾಹಿನಿ, ರಾಯಚೂರು: ನಗರದ ವಿವಿಧ ಸಂಘ- ಸಂಸ್ಥೆಗಳ ಕಚೇರಿ, ಶಿಕ್ಷಣ ಕೇಂದ್ರಗಳಲ್ಲಿ ಸೋಮವಾರ ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಸಂತಕವಿ ಕನಕದಾಸ ಜಯಂತಿ ಪ್ರಯುಕ್ತ ನಗರದ ಗಂಜ್ ವೃತ್ತದ ಬಳಿಯ ಕನಕದಾಸರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಕನಕದಾಸ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರಕ್ಕೆ ಬಂದು ಸಮಾರೋಪಗೊಂಡಿತು.
ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ನಗರ ಶಾಸಕ ಡಾ.ಶಿವರಾಜ ಎಸ್.ಪಾಟೀಲ, ನಗರಸಭೆಯ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಉಪಾಧ್ಯಕ್ಷ ಜೆ.ಸಾಜೀದ್ ಸಮೀರ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಉಪ ವಿಭಾಗಾಧಿಕಾರಿ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮ, ನಗರಸಭೆಯ ಪೌರಾಯುಕ್ತ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ಮಾಜಿ ಸಂಸದ ಬಿ.ವಿ.ನಾಯಕ, ಯುವ ಮುಖಂಡ ರವಿ ಬೋಸರಾಜು ಹಾಗೂ ಹಾಲುಮತ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ: ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಎಂ. ವೀರನಗೌಡ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ‘ಕರ್ನಾಟಕದ ಎಲ್ಲ ಶರಣರು, ಸಂತರು, ದಾರ್ಶನಿಕರು ಮತ್ತು ಸಮಾಜ ಸುಧಾರಕರ ತತ್ವ- ಸಿದ್ಧಾಂತ ಒಟ್ಟಾರೆ ಒಂದೇಯಾಗಿತ್ತು. ಸರ್ವರೂ ಸುಖವಾಗಿ ಇರಬೇಕು ಎಂದು ಮಹನೀಯರು ನೀಡಿರುವ ಜೀವನ ಸಂದೇಶಗಳನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಪರಿಪಾಲಿಸಬೇಕು’ ಎಂದು ಸಲಹೆ ನೀಡಿದರು.

ಸಂಸ್ಥೆಯ ಆಡಳಿತ ಅಧಿಕಾರಿ ಸತ್ಯನಾರಾಯಣ ಕೋಸಗಿ, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಲೇಖಾ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಹೈ ಫೆರೋಜ್ ಅವರು ಕನಕದಾಸರ ಜೀವನ, ಸಾಧನೆ, ಕೀರ್ತನೆಗಳ ಕುರಿತು ಮಾತನಾಡಿದರು. ಸಂಸ್ಥೆಯ ಪದಾಧಿಕಾರಿಗಳು, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.ನವಯುಗ ಶಿಕ್ಷಣ ಸಂಸ್ಥೆ: ನಗರದ ನವಯುಗ ಶಿಕ್ಷಣ ಸಂಸ್ಥೆಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಸಹಯೋಗದಲ್ಲಿ ಕನಕದಾಸರ ಜಯಂತಿ ಅಂಗವಾಗಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!