
ಉದಯವಾಹಿನಿ,ಬೆಂಗಳೂರು: ರಾಜ್ಯದ ಜನರು ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪೂರ್ವದಲ್ಲಿ ನೀಡಿದ್ದಂತ ಐದು ಗ್ಯಾರಂಟಿ ಭರವಸೆಗಳನ್ನು ಯಾವಾಗ ಜಾರಿಗೊಳಿಸಲಾಗುತ್ತದೆ ಎಂಬುದಾಗಿ ಎದುರು ನೋಡುತ್ತಿದ್ದಾರೆ. ಆ ಸಮಯ ಬಂದೆ ಬಿಟ್ಟಿದೆ. ಜೂನ್.2ರಂದು ನಡೆಯಲಿರುವಂತ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಅಧಿಕೃತವಾಗಿ ಜಾರಿಗೊಳ್ಳಲಿದೆ.ಈ ಬಗ್ಗೆ ಸಚಿವರ ಸಭೆಯನ್ನು ನಡೆಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಆ ಬಳಿಕ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದ ನಮ್ಮ ಎಲ್ಲಾ 5 ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಿದ್ದೇವೆ. ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಅವುಗಳನ್ನು ಜಾರಿಗೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ.ಅಂದಹಾಗೆ ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಐದು ಗ್ಯಾರಂಟಿಗಳನ್ನು ಸಚಿವ ಸಂಪುಟ ಸಭೆಯ ಬಳಿಕವೇ ಜಾರಿಗೊಳಿಸುತ್ತೀರೋ ಅಥವಾ ಹಂತ ಹಂತವಾಗಿ ಜಾರಿ ಮಾಡುತ್ತೀರೋ ಎಂಬುದಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದಂತ ಅವರು, ನಾವು ಆ ಬಗ್ಗೆ ಎಲ್ಲವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು.ಇಂದಿನ ಸಭೆಯಲ್ಲಿ ಗ್ಯಾರಂಟಿ ಜಾರಿಯ ಬಗ್ಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳೊಂದಿಗೂ ಚರ್ಚಿಸಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಆಧರಿಸಿ ಶುಕ್ರವಾರ 11 ಗಂಟೆಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಈ ಬಳಿಕ ಗ್ಯಾರಂಟಿಯ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
