ಉದಯವಾಹಿನಿ, ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ದಾಸರಹಳ್ಳಿ ವಲಯದಲ್ಲಿ ನಾಳೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆಸಲಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದಾಸರಹಳ್ಳಿ ವಲಯ ವ್ಯಾಪ್ತಿಯ ವಲಯ ಆಯುಕ್ತರ ಕಚೇರಿಯ ಸಭಾಂಗಣ ಕೊಠಡಿಯಲ್ಲಿ ನಾಳೆ ಮಧ್ಯಾಹ್ನ ೩.೦೦ ರಿಂದ ಸಂಜೆ ೫.೦೦ ರವರೆಗೆ ಸಾರ್ವಜನಿಕರ ಕುಂದು ಕೊರತೆಗಳನ್ನು ಮುಖ್ಯ ಆಯುಕ್ತರು ಖುದ್ದು ಆಲಿಸಲಿದ್ದಾರೆ.
ಈ ವೇಳೆ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರಲಿದ್ದಾರೆ.
