ಉದಯವಾಹಿನಿ, ರಾಮನಗರ : ತೀವ್ರ ಕುತೂಹಲ ಕೆರಳಿಸಿರುವ ಹಾಗೂ ರಾಷ್ಟ್ರದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ರಾಮನಗರ ತಾಲ್ಲೂಕಿನ ಅರ್ಚಕರಹಳ್ಳಿಯಲ್ಲಿರುವ ಸರ್ಕಾರಿ ಇಂಜಿನಿಯರಿಗ್ ಕಾಲೇಜಿನಲ್ಲಿ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಿಳಿಸಿದ್ದಾರೆ.ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳ ಸಮಕ್ಷಮದಲ್ಲಿ ನಾಳೆ ಬೆಳಿಗ್ಗೆ 6.45ಗಂಟೆಗೆ ಮತಯಂತ್ರಗಳನ್ನಿಟ್ಟಿರುವ ಸ್ಟ್ರಾಂಗ್ ರೂಂ ಅನ್ನು ತೆರೆಯಲಾಗುವುದು.

ಬೆಳಿಗ್ಗೆ 7.30ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಪ್ರಾರಂಭಿಸಲಾಗುವುದು. ಬೆಳಿಗ್ಗೆ 8 ಗಂಟೆಗೆ ಇವಿಎಂ ಯಂತ್ರಗಳ ಮತ ಎಣಿಕೆ ಆರಂಭವಾಗಲಿದೆ. ಒಟ್ಟಾರೆ 20 ಸುತ್ತುಗಳಲ್ಲಿ ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 3 ಕೊಠಡಿಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಂದು ಕೊಠಡಿಯಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ. ಇನ್ನೆರಡು ಕೊಠಡಿಗಳಲ್ಲಿ ಇವಿಎಂ ಮತ ಯಂತ್ರಗಳ ಮತ ಎಣಿಕೆ ನಡೆಯಲಿದೆ,ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,06,886 (ಶೇ.88.81) ಮತಗಳು ಚಲಾವಣೆಗೊಂಡಿವೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!