ಉದಯವಾಹಿನಿ, ಬೆಂಗಳೂರು: ಹಿಂದೂಗಳಿಗೆ ಸೇರಿದ ದೇವಸ್ಥಾನ , ಮಠ, ಶಾಲೆಗಳು, ಸೇರಿದಂತೆ ಮತ್ತಿತರ ಜಮೀನುಗಳಿಗೆ ವಕ್ಫ್ ನೋಟಿಸ್ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದು, ನಗರದ ಸ್ವತಂತ್ರ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್, ಶಾಸಕರಾದ ಅಶ್ವಥ್ ನಾರಾಯಣ, ಸಿ.ಕೆ.ರಾಮಮೂರ್ತಿ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಸೇರಿದ್ದರು.
ನಮ ಭೂಮಿ, ನಮ ಹಕ್ಕು ಎಂಬ ಘೋಷವಾಕ್ಯದೊಂದಿಗೆ ನಡೆದ ಪ್ರತಿಭಟನೆಯಲ್ಲಿ ವಕ್‌್ಫ ಬೋರ್ಡ್ ಮೂಲಕ ಹಿಂದೂಗಳ ಜಮೀನು, ದೇವಸ್ಥಾನ,
ಮಠಮಂದಿರಗಳ ಜಮೀನು ಕಬಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಉಗ್ರವಾಗಿ ಖಂಡಿಸಿ ಇನ್ನು ಮುಂದೆ ನೋಟಿಸ್ ನೀಡಿದರೆ ಬೀದಿಗಿಳಿಯಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವಕ್ಫ್ ಬೋರ್ಡ್ ವಿಚಾರವಾಗಿ ಜನತೆಯು ಆತಂಕಗೊಂಡಿದ್ದಾರೆ. ಹೇಳದೇ ಕೇಳದೆ ರಾತ್ರೋರಾತ್ರಿ ನೋಟಿಸ್ ಕೊಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ದಂಗೆ ಏಳುವ ಪರಿಸ್ಥಿತಿ ಎದುರಾಗಿದೆ ಎಂದು ಎಚ್ಚರಿಕೆ ಕೊಟ್ಟರು.
ಇದೊಂದು ಸಣ್ಣವಿಚಾರ ಎಂದು ಸಚಿವರು ಹೇಳುತ್ತಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಎಲ್ಲಾಕೇಸ್ಗಳನ್ನು ವಾಪಸ್ ತೆಗೀತೀರಿ, ಕಾಂಗ್ರೆಸ್ ಬಂದಾಗ ಮುಸ್ಲಿಮರ ಓಲೈಕೆ ಆಗುತ್ತದೆ. ನಮ ಹೆಣ್ಣುಮಕ್ಕಳನ್ನ ಅಪಹರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕುಮಕ್ಕು ನೀಡುತ್ತಿದೆ ಎಂದು ದೂರಿದರು.
