ಉದಯವಾಹಿನಿ, ಬಾಗಲಕೋಟೆ: ಲ್ಲೆಯ ಇಳಕಲ್ ನಲ್ಲಿ ನಡೆದ ಹೇರ್ ಡ್ರೈಯರ್ ಸ್ಫೋಟಗೊಂಡು ಮೃತ ಯೋಧನ ಪತ್ನಿ ಅಂಗೈ ಛಿದ್ರವಾದ ಪ್ರಕರಣದ ತನಿಖೆಯಲ್ಲಿ ಸ್ಫೋಟದ ಹಿಂದೆ ಲವ್ ಸ್ಟೋರಿ ಮತ್ತು ಕೊಲೆಗೆ ಸಂಚು ಇರುವುದು ಬಹಿರಂಗವಾಗಿದೆ.
ಇಳಕಲ್ ನಲ್ಲಿ ಕಳೆದ ನ.೧೫ ರಂದು ಹೇರ್ ಡ್ರೈಯರ್ ಸ್ಪೋಟಗೊಂಡು ಮೃತ ಯೋಧನ ಪತ್ನಿ ಬಸವರಾಜೇಶ್ವರಿ ಯರನಾಳ (೩೫) ಎರಡು ಮುಂಗೈ ಕಟ್ ಆಗಿದ್ದವು. ಕೇವಲ ಹೇರ್ ಡ್ರೈಯರ್ ನಿಂದ ಇಷ್ಟೊಂದು ಭೀಕರ ಸ್ಫೋಟ ಹೇಗೆ ಎನ್ನುವುದು ಅಚ್ಚರಿ ಜೊತೆಗೆ ಅನುಮಾನಗಳಿಗೆ ಕಾರಣವಾಗಿತ್ತು.
ತನಿಖೆಯ ಗಂಭೀರತೆ ಅರಿತ ಇಳಕಲ್ ನಗರ ಠಾಣೆ ಪೊಲೀಸರು ಎರಡೇ ದಿನದಲ್ಲಿ ಪ್ರಕರಣ ಭೇದಿಸಿದಾಗ ಸ್ಫೋಟದ ಹಿಂದೆ ಲವ್ ಸ್ಟೋರಿ ಇರುವುದು ಬಹಿರಂಗವಾಗಿದೆ.

ಕೊಲೆಗೆ ಸ್ಕೆಚ್ ಹಾಕಿದ್ದ: ಬಸವರಾಜೇಶ್ವರಿ ಹಾಗೂ ಸಿದ್ದಪ್ಪ ಶೀಲವಂತರ ಮಧ್ಯೆ ಪ್ರೀತಿ ಇತ್ತು. ಇದಕ್ಕೆ ಬಸವರಾಜೇಶ್ವರಿ ಸ್ನೇಹಿತೆ ಶಶಿಕಲಾ ಅಡ್ಡಿಯಾಗಿದ್ದಳು.ಇದು ಸರಿಯಲ್ಲ ಎಂದು ಹೇಳಿದ್ದಳು. ನಂತರ ಬಸವರಾಜೇಶ್ವರಿ ಸಿದ್ದಪ್ಪ ಜೊತೆ ಮಾತನಾಡುವುದನ್ನು ಬಿಟ್ಟಿದ್ದಳು.
ಇದಕ್ಕೆಲ್ಲ ಕಾರಣ ಶಶಿಕಲಾ, ಆಕೆಯನ್ನೇ ಮುಗಿಸೋಣ ಎಂದ ಸಿದ್ದಪ್ಪ ಗ್ರಾನೈಟ್ ಡೆಟೊನೇಟರ್ ಡ್ರೈಯರ್‌ನಲ್ಲಿ ಅಳವಡಿಸಿ ಶಶಿಕಲಾ ಅವರಿಗೆ ಕೊರಿಯರ್ ಮಾಡಿದ್ದ. ಆದರೆ ಅದನ್ನು ರಿಸೀವ್ ಮಾಡಿದ ಪ್ರೇಯಸಿ ಬಸವರಾಜೇಶ್ವರಿ ಕೈ ಕಳೆದುಕೊಳ್ಳುವಂತಾಗಿದೆ.
ಪಾಪಣ್ಣನಿಗೆ ಮದುವೆ: ಸಿದ್ದಪ್ಪ ಎಮ್‌ಎಬಿಎಡ್ ಓದಿದ್ದು, ಬಸವರಾಜೇಶ್ವರಿ ಹಾಗೂ ಸಿದ್ದಪ್ಪ ಮದುವೆಗೂ ಮುನ್ನವೇ ಇಬ್ಬರು ಪ್ರೀತಿಸುತ್ತಿದ್ದರು. ನಂತರ ಬಸವರಾಜೇಶ್ವರಿ ಅವರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ರಕ್ಕಸಗಿ ಗ್ರಾಮದ ಯೋಧ ಪಾಪಣ್ಣನಿಗೆ ಮದುವೆ ಮಾಡಿ ಕೊಡಲಾಗಿತ್ತು. ಪಾಪಣ್ಣ ೨೦೧೭ ರಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ನಂತರ ಇವರಿಬ್ಬರ ಲವ್ ಮತ್ತಷ್ಟು ಗಟ್ಟಿಯಾಗಿತ್ತು.
ಬಸವರಾಜೇಶ್ವರಿ ರಕ್ಕಸಗಿ ಬಿಟ್ಟು ಇಳಕಲ್ ನಗರದ ಬಸವನಗರದಲ್ಲಿ ಇಬ್ಬರು ಹೆಣ್ಣು ಮಕ್ಕಳ ಜೊತೆ ನೆಲೆಸಿದ್ದಳು.

Leave a Reply

Your email address will not be published. Required fields are marked *

error: Content is protected !!