ಉದಯವಾಹಿನಿ, ಸುರಪುರ: ‘ಈ ಭಾಗದ ಶೈಕ್ಷಣಿಕ ಪ್ರಗತಿ ಸಾಧಿಸಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಕೆಕೆಆರ್‌ಡಿಬಿಯ ಅಕ್ಷರ ಆವಿಷ್ಕಾರ ಯೋಜನೆ ಅಡಿಯಲ್ಲಿ ಶಿಕ್ಷಣಕ್ಕೆ ಅಗತ್ಯವಿರುವ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ’ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು. ಸಮೀಪದ ರಂಗಂಪೇಟೆಯಲ್ಲಿ ಶುಕ್ರವಾರ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನೋರಂಜನೆ ಹಾಸನ ‘ನಮ್ಮ ತಂದೆ ಶಾಸಕರಾಗಿದ್ದ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರು ಕ್ಷೇತ್ರದ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿದ್ದರು. ಅದರಂತೆ ನಾನು ಸಹ ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವೆ’ ಎಂದರು. ‘ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವೆಂಬ ಹಣೆ ಪಟ್ಟಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ ಬೀದರ್ ಕ್ಷೇತ್ರದಲ್ಲಿ ಹೊಸದಾಗಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ತಿಳಿಸಿದರು.
